ಬಸವಣ್ಣನವರ ವಚನಗಳು – Basavanna Vachana Kannada
സാമಾಜಿಕ ಸುಧാരಕನಾಗಿ, ಬಸವಣ್ಣ ಅವರು ಹೆಚ್ಚಾಗಿರು ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗಿತ್ತು. ಆದರೆ, ಅವರು ತಮ್ಮ ಕಾಲದ ಇತರ ಸುಧಾರಕರೊಂದಿಗೆ, ವೇದಗಳ ಬೋಧನೆಗಳು ಮತ್ತು ಸಂಪ್ರದಾಯಗಳನ್ನು ಮರುಪರಿಯಾಗಿ ವಿಮರ್ಶಿಸುತ್ತಾ, ಭಾರತದ ಇತಿಹಾಸದಲ್ಲಿ ಒಂದು ಶ್ರೇಷ್ಠ ಧಾರ್ಮಿಕ ಚಳವಳಿಯನ್ನು ಪ್ರಾರಂಭಿಸಿದರು.
ಬಸವಣ್ಣ 12ನೇ ಶತಮಾನದ ತತ್ವಜ್ಞಾನಿ, ಸಾಮಾಜಿಕ ಸುಧಾರಕ ಮತ್ತು ಬೋಧಕನಾಗಿದ್ದು, ಅವರ ಬೋಧನೆಗಳನ್ನು ಕರ್ನಾಟಕದಿಂದ ಮಾತ್ರವಲ್ಲದೆ ಇಡೀ ದೇಶದಲ್ಲಿ ಬಳಸಲಾಗುತ್ತದೆ.
Basavanna Vachana Kannada PDF Download
ಜ್ಞಾನಾಮೃತವೆಂಬ ಜಲಧಿಯ ಮೇಲೆ
ಸಂಸಾರವೆಂಬ ಹಾವಸೆ ಮುಸುಕಿಹುದು.
ನೀರ್ ಮೊಗೆವವರು ಬಂದು ನೂಕಿದಲ್ಲದೆ ತೆರಳದು.
ಮರಳಿ ಮರಳಿ ಮುಸುಕುದು ಮಾಣದಯ್ಯ.
ಆಗಳೂ ಎನ್ನುವನು ನೆನೆವುತ್ತಿರಬೇಕೆಂದು-
ಬೇಗ ಗುರು ಅಪ್ಪೈಸಿ ತನ್ನ ಪ್ರಸಾದವೆಂದು ಕುರುಹ ಕೊಟ್ಟನು.
ದಿವಾರಾತ್ರಿ ಮಾಡ ಹೇಳಿದ ಲಿಂಗಪೂಜೆಯ, ತನ್ನನರಿಯಬೇಕೆಂದು.
ಕೆರೆಯ ನೀರನುಂಡು ತೊರೆಯ ನೀರ ಹೊಗಳುವ ಅರೆಮರುಳುಗಳ ಮೆಚ್ಚ ನಮ್ಮ ಕೂಡಲಸಂಗಮದೇವ.
ಮಡಕೆಯ ಮಾಡುವಡೆ ಮಣ್ಣೇ ಮೊದಲು,
ತೊಡಿಗೆಯ ಮಾಡುವಡೆ ಹೊನ್ನೇ ಮೊಡುವಲ್ಲಿ,
ಶಿವಪಥವನರಿವಡೆ ಗುರುಪಾದವೇ ಮೊದಲು
ಕೂಡಲಸಂಗಮದೇವನರಿವಡೆ ಶರಣರ ಸಂಗವೇ ಮೊದಲು.
ಅಯ್ಯಾ, ನೀನು ನಿರಾಕಾರವಾದಲ್ಲಿ
ನಾನು ಜ್ಞಾನವೆಂಬ ಆಟವಾಗಿದ್ದೆ ಕಾಣಾ.
ಅಯ್ಯಾ, ನೀನು ನಾಂಟ್ಯಕ್ಕೆ ನಿಂದಲ್ಲಿ
ನಾನು ಚೈತನ್ಯವೆಂಬ ಆಟವಾಗಿದ್ದೆ ಕಾಣಾ.
ಅಯ್ಯಾ, ನೀನು ಸಾಕಾರವಾಗಿದ್ದಲ್ಲಿ
ನಾನು ವೃಷಭನೆಂಬ ಆಟವಾಗಿದ್ದೆ ಕಾಣಾ.
ಅಯ್ಯಾ, ನೀನೆನ್ನ ಭವವ ಕೊಂದಹೆನೆಂದು
ಜಂಗಮಲಾಂಛನವಾಗಿ ಬಂದಲ್ಲಿ
ನಾನು ಭಕ್ತನೆಂಬ ಆಟವಾಗಿದ್ದೆ ಕಾಣಾ ಕೂಡಲಸಂಗಮದೇವ.
ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ
ಸಂಸಾರವೆಂಬ ರಾಹು ಸರ್ವગ્રಾಸಿಯಾಗಿ ನುಂಗಿತ್ತಯ್ಯ,
ಇಂದೆನ್ನ ದೇಹಕೆ ಗ್ರಹಣವಾಯಿತ್ತು.
ಇನ್ನೆಂದಿಂಗೆ ಮೋಕ್ಷವಹುದೋ. ಕೂಡಲಸಂಗಮದೇವ.
ಸಂಸಾರವೆಂಬ ಸರ್ಪ ಮುಟ್ಟಲು
ಪಂಚೇಂದ್ರಿಯವಿಷಯವೆಂಬ
ವಿಷದಿಂದಾನು ಮುಂದುಗೆಟ್ಟೆನಯ್ಯ,
ಆನು ಹೊರಳಿ ಬೀಳುತ್ತಿದ್ದೆನಯ್ಯ;
‘ಓಂ ನಮಶ್ಶಿವಾಯ’ ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯ
ಕೂಡಲಸಂಗಮದೇವ.
ಎನ್ನ ಮನವೆಂಬ ಮರ್ಕಟನು
ತನುವಿಕಾರವೆಂಬ ಅಲ್ಪಸುಖದಾಸೆ ಮಾಡಿ,
ವೃಥಾ ಭ್ರಮಣಗೊಂಡು, ನಾನಾ ದೆಸೆಗೆ ಲಂಘಿಸಿ ಅಳಲಿಸಿ ಬಳಲಿಸುತ್ತಿದೆ ನೋಡಾ.
ಕೂಡಲಸಂಗಮದೇವರೆಂಬ ವೃಕ್ಷಕ್ಕೆ ಲಂಘಿಸಿ
ಅಪರಿಮಿತ ಸುಖವನೆಯ್ದದು ನೋಡಾ
ತುಪ್ಪದ ಸವಿಗೆ ಅಲಗ ನೆಕ್ಕುವ
ಸೊಣಗನಂತೆನ್ನ ಬಾಳುವे
ಸಂಸಾರಸಂಗವ ಬಿಡದು ನೋಡೆನ್ನ ಮನವು.
ಈ ನಾಯಿತನವ ಮಾಣಿಸು
ಕೂಡಲಸಂಗಮದೇವಯ್ಯ ನಿಮ್ಮ ಧರ್ಮ.
ವಚನದ ಹುಸಿ-ನುಸುಳೆಂತು ಮಾಬುದೆನ್ನ.
ಮನದ ಮರ್ಕಟತನವೆಂತು ಮಾಬುದೆನ್ನ.
ಹೃದಯದ ಕಲ್ಮಷವೆಂತು ಮಾಬುದೆನ್ನ.
ಕಾಯವಿಕಾರಕ್ಕೆ ತರಿಸಲುವೋದೆನು.
ಎನಗಿದು ವಿಧಿಯೇ, ಕೂಡಲಸಂಗಮದೇವ.
ವಿಕಳನಾದೆನು ಪಂಚೇಂದ್ರಿಯಧಾತುವಿಂದ.
ಮತಿಗೆಟ್ಟನು ಮನದ ವಿಕಾರದಿಂದ.
ಧೃತಿಗೆಟ್ಟೆನು ಕಾಯವಿಕಾರದಿಂದ.
ಶರಣುವೊಕ್ಕೆನು ಕೂಡಲಸಂಗಮದೇವಯ್ಯ
ಎನ್ನುವನು ಕಾಯಯ್ಯ.
ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ,
ತಿಳಿಯಲೀಯದು; ಎಚ್ಚರಲೀಯದು.
ಎನ್ನವಗುಣವೆಂಬ ಕಸವ ಕತ್ತರಿಹಕ್ ಸಲಹಯ್ಯ ಲಿಂಗತಂದೆ.
ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವ.
ನೀ ಹುಟ್ಟಿಸಿದಲ್ಲಿ ಹುಟ್ಟಿ, ನೀ ಕೊಂದಲ್ಲಿ ಸಾಯದೆ ಎನ್ನ ವಶವೇ ಅಯ್ಯ.
ನೀನಿರಿಸಿದಲ್ಲಿ ಇರದೆ ಎನ್ನ ವಶವೇ ಅಯ್ಯ.
ಅಕಟಕಟಾ ಎನ್ನವನೆನ್ನವನೆನ್ನಯ್ಯ ಕೂಡಲಸಂಗಮದೇವಯ್ಯ.
ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ.
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿಲ್ಲ.
ತನುವಿನಲಿ ಹುಸಿ ತುಂಬಿ, ಮನದಲ್ಲಿ ವಿಷಯ ತುಂಬಿ ಮನೆಯೊಳಗೆ ಮನೆಯೊಡ್ಡನಿಲ್ಲ.
ಕೂಡಲಸಂಗಮದೇವ.
ಹಬ್ಬಕ್ಕೆ ತಂದ ಹರಕೆಯ ಕುರಿ
ತೋರಣಕ್ಕೆ ಬಂದ ತಳಿರ ಮೇಯಿತ್ತು.
ಕೊಂಡಹರೆಂಬುದನರಿಯದೆ ಬೆಂದೊಡಲ ಹೊರೆಯ ಹೋಯಿತ್ತು.
ಅದಂದೆ ಹುಟ್ಟಿತು, ಅದಂದೆ ಹೊಂದಿತ್ತು.
ಕೊಂಡವರುಳಿದರೆ ಕೂಡಲಸಂಗಮದೇವ
ಗಂಡ ಶಿವಲಿಂಗದೇವರ ಭಕ್ತ,
ಹೆಂಡತಿ ಮಾರಿಮಸಣಿಯ ಭಕ್ತೆ;
ಗಂಡ ಕೊಂಬುದು ಪಾದೋದಕಪ್ರಸಾದ,
ಹೆಂಡತಿ ಕೊಂಬುದು ಸುರೆಮಾಂಸ.
ಭಾಂಡ-ಭಾಜನ ಶುದ್ಧವಿಲ್ಲದವರ ಭಕ್ತಿ
ಹೆಂಡದ ಮಡಕೆಯ ಹೊರಗೆ ತೊಳೆದಂತೆ
ಕೂಡಲಸಂಗಮದೇವ.
ಹಾವಿನ ಬಾಯಿ ಕಪ್ಪೆ ಹಸಿದು
ತಾ ಹಾರುವ ನೊಣಕಾಸೆ ಮಾಡುವಂತೆ,
ಶೂಲವನೇರುತ್ತದೆ ಕಳ್ಳ ಹಾಲು ತುಪ್ಪವ ಕುಡಿದು
ಮೇಲಿನ್ನೇಸು ಕಾಲ ಬದುಕುವನೋ.
ಕೆಡುವೊಡಲ ನೆಚ್ಚಿ, ಕಡೆಹುಸಿಯನೆ ಹುಸಿದು
ಒಡಲ ಹೊರೆವವರ ಮೆಚ್ಚ ನಮ್ಮ ಕೂಡಲಸಂಗಮದೇವ.
ಭಕ್ತರ ಕಂಡರೆ ಬೋಳಪ್ಪಿರಯ್ಯ;
ಸವಣರ ಕಂಡರೆ ಬತ್ತಲೆಯಪ್ಪಿರಯ್ಯ
ಹಾರುವರ ಕಂಡರೆ ಹರಿನಾಮವೆಂಬಿರಯ್ಯ;
ಅವರವರ ಕಂಡರೆ ಅವರವರಂತೆ
ಸೂಳೆಗೆ ಹುಟ್ಟಿದವರ ತೋರದಿರಯ್ಯ.
ಕೂಡಲಸಂಗಯ್ಯನ ಪೂಜಿಸಿ ಅನ್ಯದೈವಂಗಳಿಗೆರಗಿ
ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯ.
ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ
ಸಲಹುತ್ತ, ‘ಶಿವಶಿವಾ’ ಎಂದೋದಿಸಯ್ಯ.
ಭಕ್ತಿ ಎಂಬ ಪಂಜರದೊಳಗಡ್ಡು ಸಲಹು ಕೂಡಲಸಂಗಮದೇವ.
ಕರಿಯಂಜುವುದು ಅಂಕುಶಕ್ಕಯ್ಯ.
ಗಿರಿಯಂಜುವುದೇಕಪುತ್ತಿ;
ತಮಂಧವಂಜುವುದು ಜ್ಯೋತಿಗಯ್ಯ.
ಕಾನವನಂಜುದು ಬೇಗೆಗಯ್ಯ.
ಪಂಚಮಹಾಪಾತಕವಂಜಿನಲ್ಲಿ
ನಮ್ಮ ಕೂಡಲಸಂಗನ ನಾಮಕ್ಕಯ್ಯ.
ನೀರಿಂಗೆ ನೈದಿಲೇ ಶೃಂಗಾರ,
ಊರಿಂಗೆ ಆರವೆಯೇ ಶೃಂಗಾರ,
ಸಮುದ್ರಕ್ಕೆ ತೆರೆಯೇ ಶೃಂಗಾರ
ನಾರಿಗೆ ಗುಣವೇ ಶೃಂಗಾರ
ಗಗನಕ್ಕೆ ಚಂದ್ರಮನೇ ಶೃಂಗಾರ
ನಮ್ಮ ಕೂಡಲಸಂಗನ ಶರಣರಿಗೆ ನೊಸಲ ವಿಭೂತಿಯೇ ಶೃಂಗಾರ.
ನೀನೊಲಿದರೆ ಕೊರಡು ಕೊನರುವುದಯ್ಯ.
ನೀನೊಲಿದರೆ ಬರಡು ಹಯನಹುದಯ್ಯ.
ನೀನೊಲಿದರೆ ವಿಷವಮೃತವಹುದಯ್ಯ.
ನೀನೊಲಿದರೆ ಸಕಲ ಪಡಿಪದಾರ್ಥ ಇದಿರಲಿಪ್ಪವು
ಕೂಡಲಸಂಗಮದೇವ.
You can download the Basavanna Vachana Kannada PDF using the link given below.